Deuteronomy 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.
Kannada BSI Bible 2016
ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ನನಗೆ - ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವದಕ್ಕೆ ಕೊಟ್ಟಿರುವದರಿಂದ ಅದರಲ್ಲಿ ನಿಮಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನೀವು ಎದ್ದು ಜೆರೆದ್ ಹಳ್ಳವನ್ನು ದಾಟಬೇಕೆಂದು ಆಜ್ಞಾಪಿಸಿದನು.
Kannada Bible (KNCL) BSI 2016
ಆಗ ಸರ್ವೇಶ್ವರ ನನಗೆ, ‘ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸೊತ್ತನ್ನು ಕೊಡುವುದಿಲ್ಲ. ನೀವು ಎದ್ದು ಜೆರೆದ್ ಹಳ್ಳವನ್ನು ದಾಟಬೇಕು.’ ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ನನಗೆ, “ಮೋವಾಬ್ಯರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ಏಕೆಂದರೆ ನಾನು ಅವರ ದೇಶದಲ್ಲಿ ನಿನಗೆ ಸೊತ್ತನ್ನು ಕೊಡುವುದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಆರ್ ಎಂಬ ಪ್ರದೇಶವನ್ನು ಕೊಟ್ಟೆನಲ್ಲವೇ?” ಎಂದರು.