Deuteronomy 20:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಒಂದು ಪಟ್ಟಣವನ್ನು ಆಕ್ರಮಿಸಲು ಹೋದಾಗ, ಅಲ್ಲಿಯ ಜನರಿಗೆ ‘ಶಾಂತಿಸಂಧಾನ’ಕ್ಕೆ ಕರೆಯನ್ನು ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.
Kannada BSI Bible 2016
ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.
Kannada Bible (KNCL) BSI 2016
“ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಲು ಅದರ ಹತ್ತಿರಕ್ಕೆ ಬಂದಾಗ, ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಶರಣಾಗಬಹುದೆಂದು ಪ್ರಕಟಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಯುದ್ಧಮಾಡುವುದಕ್ಕಾಗಿ ಒಂದು ಪಟ್ಟಣದ ಹತ್ತಿರ ಬಂದಾಗ, ಮೊದಲು ಅದನ್ನು ಸಮಾಧಾನಕ್ಕಾಗಿ ಕರೆಯಬೇಕು.