Deuteronomy 20:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆಂಗಸರನ್ನು, ಮಕ್ಕಳನ್ನು, ದನಕುರಿಗಳನ್ನು ಮತ್ತು ಪಟ್ಟಣದೊಳಗಿದ್ದವುಗಳನ್ನೆಲ್ಲಾ ನಿಮ್ಮ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ಅವುಗಳನ್ನು ನಿಮಗೆ ಕೊಟ್ಟಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಂಗಸರನ್ನೂ, ಮಕ್ಕಳನ್ನೂ, ದನಗಳನ್ನೂ ಮತ್ತು ಊರಿನಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.
Kannada BSI Bible 2016
ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಂಗಸರನ್ನೂ ಮಕ್ಕಳನ್ನೂ ದನಗಳನ್ನೂ ಊರಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.
Kannada Bible (KNCL) BSI 2016
ಹೆಂಗಸರನ್ನೂ ಮಕ್ಕಳನ್ನೂ ದನಗಳನ್ನೂ ಊರಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸ್ತ್ರೀಯರನ್ನೂ ಚಿಕ್ಕವರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲಾ ಆಸ್ತಿಯನ್ನೂ ನಿಮಗಾಗಿ ತಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವಂಥ ನಿಮ್ಮ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.