Deuteronomy 20:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ ಆಗ ಅವರು ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ; ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಮಾಡುವ ಭಯಂಕರ ಕೃತ್ಯಗಳನ್ನು ಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು.
Kannada BSI Bible 2016
ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧಾಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾದೀರಿ.
Kannada Bible (KNCL) BSI 2016
ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧಾಚಾರಗಳನ್ನು ನಿಮಗೆ ಕಲಿಸಿಕೊಡಬಹುದು; ಮತ್ತು ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾಗಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಆರಾಧಿಸುವಾಗ ಮಾಡಿದ ಎಲ್ಲಾ ಅಸಹ್ಯಕರವಾದ ಆಚಾರಗಳನ್ನು ನಿಮಗೆ ಕಲಿಸಿಕೊಡಬಹುದು ಮತ್ತು ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ದ್ರೋಹಿಗಳಾಗಬಹುದು.