Deuteronomy 20:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಒಂದು ಪಟ್ಟಣವನ್ನು ಬಹುಕಾಲದಿಂದ ಮುತ್ತಿಗೆ ಹಾಕಿದರೆ ಸುತ್ತಮುತ್ತಲಿರುವ ಮರಗಳನ್ನು ಕಡಿದುಹಾಕಬಾರದು. ಅವುಗಳ ಫಲಗಳನ್ನು ತಿನ್ನಬಹುದು; ಆದರೆ ಕಡಿಯಬಾರದು. ಅವು ನಿಮ್ಮ ವೈರಿಗಳಲ್ಲವಲ್ಲಾ? ಅವು ನಿಮ್ಮೊಂದಿಗೆ ಯುದ್ಧ ಮಾಡುವುದಿಲ್ಲವಲ್ಲಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ?
Kannada BSI Bible 2016
ನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ.ಆಹಾರಕ್ಕಾಗದ ಮರ ಗಳೆಂದು ನಿನಗೆ ತಿಳಿದಿರುವ ಮರಗಳನ್ನು ಮಾತ್ರ ಕೆಡಿಸಿ ಕಡಿದುಹಾಕಿ ನಿನ್ನ ಸಂಗಡ ಯುದ್ಧಮಾಡುವ ಪಟ್ಟಣಕ್ಕೆ ವಿರೋಧವಾಗಿ ಅದು ಬೀಳುವ ತನಕ ಮುತ್ತಿಗೆ ಹಾಕಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವದಕ್ಕಾಗಿ ಅದಕ್ಕೆ ಬಹುದಿವಸ ಮುತ್ತಿಗೆಹಾಕಿರುವಾಗ ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಶತ್ರುಗಳೇನು? ಅವುಗಳೊಡನೆ ಯುದ್ಧಮಾಡಬಹುದೇ?
Kannada Bible (KNCL) BSI 2016
“ನೀವು ಒಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಲು ಅದಕ್ಕೆ ಬಹುದಿವಸ ಮುತ್ತಿಗೆ ಹಾಕಬೇಕಾಗಬಹುದು; ಅದಕ್ಕೆ ಸೇರಿದ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಶತ್ರುಗಳೇನು? ಅವುಗಳೊಡನೆ ಯುದ್ಧಮಾಡಬಹುದೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಲು ಅದಕ್ಕೆ ಬಹು ದಿವಸ ಮುತ್ತಿಗೆ ಹಾಕಬೇಕಾಗಬಹುದು. ಆಗ ಅದಕ್ಕೆ ಸೇರಿದ ಮರಗಳನ್ನು ಹಾಳುಮಾಡಬಾರದು. ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಶತ್ರುಗಳೇನು? ಅವುಗಳೊಡನೆ ಯುದ್ಧ ಮಾಡಬಹುದೇ?