Deuteronomy 20:3 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಇಸ್ರೇಲ್ ಜನರೇ, ನನ್ನ ಮಾತನ್ನು ಆಲಿಸಿರಿ. ಈ ದಿವಸ ನಿಮ್ಮ ವೈರಿಗಳೊಂದಿಗೆ ಕಾದಾಡಲು ಹೋಗುತ್ತಿದ್ದೀರಿ. ನೀವು ಅಧೈರ್ಯಗೊಳ್ಳಬೇಡಿರಿ. ಗಲಿಬಿಲಿಗೆ ಸಿಕ್ಕಿಕೊಳ್ಳಬೇಡಿ; ವೈರಿಗಳಿಗೆ ಭಯಪಡಬೇಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.
Kannada BSI Bible 2016
ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರೇ ಕೇಳಿರಿ, ನೀವು ಈ ಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸಮೀಪ ಬಂದಿದ್ದೀರಿ. ನಿಮ್ಮ ಹೃದಯಗಳು ಕುಗ್ಗಬಾರದು. ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂ ಬೇಡಿರಿ.