Deuteronomy 20:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ಲೇವಿಯ ಅಧಿಕಾರಿಗಳು ಸೈನಿಕರಿಗೆ, ‘ನಿಮ್ಮಲ್ಲಿ ಯಾರಾದರೂ ಹೊಸಮನೆಯನ್ನು ಕಟ್ಟಿ ಗೃಹಪ್ರವೇಶ ಮಾಡಿರದಿದ್ದರೆ ಅವನು ತನ್ನ ಮನೆಗೆ ಹೋಗಲಿ. ಒಂದುವೇಳೆ ಅವನು ರಣರಂಗದಲ್ಲಿ ಸತ್ತರೆ ಇನ್ನೊಬ್ಬನು ಅವನ ಮನೆಗೆ ಸೇರಿಕೊಳ್ಳಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಸೈನ್ಯಾಧಿಪತಿಗಳು ಅವರಿಗೆ, “ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು.
Kannada BSI Bible 2016
ಆಗ ಅಧಿಕಾರಿಗಳು ಜನಕ್ಕೆ--ಹೊಸ ಮನೆಯನ್ನು ಕಟ್ಟಿ ಗೃಹಪ್ರತಿಷ್ಠೆಮಾಡದ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಗೃಹಪ್ರತಿಷ್ಠೆಮಾಡದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಸೈನ್ಯಾಧಿಪತಿಗಳು ಅವರಿಗೆ - ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನೂ ಗೃಹಪ್ರವೇಶ ಮಾಡದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶಮಾಡಿಕೊಂಡಾನು.
Kannada Bible (KNCL) BSI 2016
“ಮತ್ತು ಸೇನಾಧಿಪತಿಗಳು ಅವರಿಗೆ, ‘ನಿಮ್ಮಲ್ಲಿ ಯಾವನಾದರು ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಗೃಹಪ್ರವೇಶಮಾಡದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಂಡಾನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತು ಅಧಿಕಾರಿಗಳು ಅವರಿಗೆ ಹೀಗೆ ಹೇಳಬೇಕು, “ನಿಮ್ಮಲ್ಲಿ ಯಾವನಾದರು ಹೊಸ ಮನೆಯನ್ನು ಕಟ್ಟಿ, ಗೃಹ ಪ್ರತಿಷ್ಠೆ ಇನ್ನು ಮಾಡದಿದ್ದರೆ, ಅವನು ತನ್ನ ಮನೆಗೆ ಹೋಗಲಿ. ಯುದ್ಧದಲ್ಲಿ ಸತ್ತರೆ ಬೇರೊಬ್ಬನು ಆ ಮನೆಯನ್ನು ಸೇರಿಕೊಂಡಾನು.