Deuteronomy 20:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮಲ್ಲಿ ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಫಲವನ್ನು ಕೂಡಿಸಿಲ್ಲದಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನು ರಣರಂಗದಲ್ಲಿ ಮಡಿದರೆ ಅವನ ದ್ರಾಕ್ಷಿತೋಟದ ಫಲಗಳು ಬೇರೊಬ್ಬನ ಪಾಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಬಹುದು.
Kannada BSI Bible 2016
ದ್ರಾಕ್ಷೇತೋಟವನ್ನು ನೆಟ್ಟು ಅದರ ಫಲ ವನ್ನು ತಿನ್ನದೆ ಇರುವ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅದರ ಫಲ ತಿನ್ನದಹಾಗೆ ಅವನು ಸಹ ತಿರುಗಿಕೊಂಡು ತನ್ನ ಮನೆಗೆ ಹೋಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ದ್ರಾಕ್ಷೇತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಾನು.
Kannada Bible (KNCL) BSI 2016
ಯಾವನಾದರು ದ್ರಾಕ್ಷೀತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಾನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ರಾಕ್ಷಿತೋಟವನ್ನು ನೆಟ್ಟು ಅದರ ಫಲವನ್ನು ತಿನ್ನದೇ ಇರುವ ಮನುಷ್ಯನು, ತನ್ನ ಮನೆಗೆ ಹೋಗಲಿ. ಅವನು ಯುದ್ಧದಲ್ಲಿ ಸತ್ತರೆ ಬೇರೊಬ್ಬನು ಆ ಫಲ ತಿಂದಾನು.