Deuteronomy 20:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಲೇವಿಯ ಅಧಿಕಾರಿಗಳು ಹೇಳಬೇಕಾದದ್ದೇನೆಂದರೆ: ‘ನಿಮ್ಮಲ್ಲಿ ಯಾರಾದರೂ ತಮ್ಮ ಧೈರ್ಯವನ್ನು ಕಳೆದುಕೊಂಡಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನಿಂದಾಗಿ ಇತರ ಸೈನಿಕರೂ ತಮ್ಮ ಧೈರ್ಯವನ್ನು ಕಳೆದುಕೊಳ್ಳಬಹುದು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.
Kannada BSI Bible 2016
ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು - ಯಾವನಾದರೂ ಧೈರ್ಯಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವದರಿಂದ ಅವನ ಜೊತೆಗಾರರೂ ದಿಗಿಲು ಪಟ್ಟಾರು ಎಂದು ಹೇಳಬೇಕು.
Kannada Bible (KNCL) BSI 2016
ಮತ್ತು ‘ಯಾವನಾದರೂ ಧೈರ್ಯ ಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು’, ಎಂದು ಹೇಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅಧಿಕಾರಿಗಳು ಮಾತನಾಡಿ, “ಯಾವನಾದರೂ ಯುದ್ಧಕ್ಕೆ ಭಯಪಟ್ಟು ಅಂಜಿಕೊಂಡರೆ, ಅಂಥವನು ಮನೆಗೆ ಹೋಗಲಿ. ಅವನನ್ನು ನೋಡಿ ಬೇರೆಯವರೂ ಹೆದರಿಕೊಳ್ಳುವ ಅವಕಾಶವಿದೆ,” ಎಂದು ಹೇಳಬೇಕು.
Recommended Reading