Deuteronomy 21:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕೆಯು ತನ್ನ ಸೆರೆವಾಸದ ಬಟ್ಟೆಯನ್ನು ತೆಗೆದಿಟ್ಟು ಒಂದು ತಿಂಗಳು ಪೂರ್ತಿ ತನ್ನ ತಂದೆತಾಯಿಗಳಿಗಾಗಿ ಶೋಕಿಸಬೇಕು. ಅನಂತರ ನೀನು ಆಕೆಯ ಬಳಿಗೆ ಹೋಗಿ ಆಕೆಯನ್ನು ವರಿಸಿ ಗಂಡನಾಗಬಹುದು. ಆಕೆಯು ನಿನ್ನ ಹೆಂಡತಿಯಾಗುವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳಿನ ವರೆಗೆ ತಾಯಿ ಮತ್ತು ತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.
Kannada BSI Bible 2016
ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಆ ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು ಅವನ ಮನೆಯಲ್ಲಿ ಒಂದು ತಿಂಗಳಿನವರೆಗೆ ತಾಯಿತಂದೆಗಳ ವಿಯೋಗದ ನಿವಿುತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.
Kannada Bible (KNCL) BSI 2016
ಅವನ ಮನೆಯಲ್ಲಿ ಒಂದು ತಿಂಗಳವರೆಗೆ ತನ್ನ ತಾಯಿತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳವರೆಗೆ ತನ್ನ ತಾಯಿ ತಂದೆಯರನ್ನು ಸ್ಮರಿಸಿ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.