Deuteronomy 21:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕೆಯನ್ನು ನೀನು ಮೆಚ್ಚದಿದ್ದರೆ ವಿವಾಹವಿಚ್ಛೇದನೆ ಮಾಡಿ ಆಕೆಯನ್ನು ಸ್ವತಂತ್ರಳಾಗುವಂತೆ ಬಿಟ್ಟುಬಿಡಬಹುದು. ಆದರೆ ನೀನು ಆಕೆಯನ್ನು ಮಾರಬಾರದು. ಆಕೆಯನ್ನು ಗುಲಾಮಳಂತೆ ನೋಡಬಾರದು. ಯಾಕೆಂದರೆ ನೀನು ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡಿದ್ದಿಯಲ್ಲಾ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು.
Kannada BSI Bible 2016
ಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವಳು ಅವನಿಗೆ ಇಷ್ಟವಾಗದೆ ಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಕೂಡಿದ್ದರಿಂದ ದಾಸತ್ವಕ್ಕೆ ಮಾರಲೂಬಾರದು, ದಾಸಿಯಂತೆ ನಡಿಸಲೂ ಬಾರದು.
Kannada Bible (KNCL) BSI 2016
ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳು ಆಶಿಸುವಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಕೂಡಿದ್ದರಿಂದ ಹಣಕ್ಕೆ ಮಾರಲೂಬಾರದು, ಊಳಿಗದವಳಂತೆ ನಡೆಸಲೂಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಅವಳು ಅವನಿಗೆ ಇಷ್ಟವಾಗದೆ ಹೋದರೆ, ಅವನು ಅವಳನ್ನು ಅವಳು ಬಯಸಿದ ಸ್ಥಳಕ್ಕೆ ಕಳುಹಿಸಿಬಿಡಬೇಕು. ಅವಳನ್ನು ಅವಮಾನಪಡಿಸಿದ್ದರಿಂದ ದಾಸತ್ವಕ್ಕೆ ಮಾರಲೂಬಾರದು, ದಾಸಿಯಂತೆ ನಡೆಸಲೂಬಾರದು.