Deuteronomy 21:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮನುಷ್ಯನು ತನ್ನ ಆಸ್ತಿಯನ್ನು ತನ್ನ ಮಕ್ಕಳಿಗೆ ಪಾಲುಮಾಡಿ ಕೊಡುವಾಗ ಚೊಚ್ಚಲಮಗನಿಗೆ ಸಿಗಬೇಕಾದ ಆಸ್ತಿಯನ್ನು ತಾನು ಪ್ರೀತಿಸುವ ಹೆಂಡತಿಯ ಮಗನಿಗೆ ಕೊಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂದೆಯಾದವನು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ತಾನು ಪ್ರೀತಿಸುವ ಹೆಂಡತಿಯ ಮಗನನ್ನೇ ಚೊಚ್ಚಲನೆಂದು ಭಾವಿಸಬಾರದು.
Kannada BSI Bible 2016
ಅವನು ತನ್ನ ಕುಮಾರರಿಗೆ ತನಗೆ ಉಂಟಾದದ್ದನ್ನು ಸ್ವಾಸ್ತ್ಯವಾಗಿ ಕೊಡುವ ದಿವಸ ದಲ್ಲಿ ಚೊಚ್ಚಲಾಗಿರುವ ಹಗೆಮಾಡಲ್ಪಟ್ಟವಳ ಮಗನಿಗೆ ಬದಲಾಗಿ ಪ್ರೀತಿಮಾಡಲ್ಪಟ್ಟವಳ ಮಗನನ್ನು ಚೊಚ್ಚ ಲಾಗಿ ಮಾಡಕೂಡದು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂದೆಯು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ಪ್ರೀತಿಯ ಹೆಂಡತಿಯ ಮಗನನ್ನೇ ಚೊಚ್ಚಲವನೆಂದು ಭಾವಿಸಕೂಡದು.
Kannada Bible (KNCL) BSI 2016
ತಂದೆ ತನ್ನ ಆಸ್ತಿಯನ್ನು ಮಕ್ಕಳಿಗೆ ಸೊತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು, ಪ್ರೀತಿಯ ಹೆಂಡತಿಯ ಮಗನನ್ನೇ ಚೊಚ್ಚಲವನೆಂದು ಭಾವಿಸಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ಪುತ್ರರಿಗೆ ತನ್ನ ಆಸ್ತಿಯನ್ನು ಹಂಚಿ ಕೊಡುವಾಗ, ತಾನು ಪ್ರೀತಿಮಾಡದ ಹೆಂಡತಿಯ ಚೊಚ್ಚಲ ಮಗನಿಗೆ ಬದಲಾಗಿ ಅವನು ಪ್ರೀತಿಸುವವಳ ಮಗನನ್ನು ಹಿರಿಯನೆಂದು ಮಾಡಕೂಡದು.