Deuteronomy 21:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಡೀ ರಾತ್ರಿ ಆ ಮರದಲ್ಲಿ ಅವನ ಶರೀರ ನೇತಾಡುವಂತೆ ಮಾಡಬಾರದು. ಅದೇ ದಿವಸದಲ್ಲಿ ಅವನ ಶವವು ಹೂಳಲ್ಪಡಬೇಕು. ಯಾಕೆಂದರೆ ಮರದಲ್ಲಿ ತೂಗುಹಾಕಲ್ಪಟ್ಟ ಮನುಷ್ಯನು ದೇವರಿಂದ ಶಪಿಸಲ್ಪಟ್ಟವನು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ನೀವು ಹೊಲಸು ಮಾಡಬೇಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.
Kannada BSI Bible 2016
ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಲ್ಲವೇ.
Kannada Bible (KNCL) BSI 2016
ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.