Deuteronomy 21:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹರಿಯುವ ನೀರಿರುವ ತಗ್ಗಿಗೆ ಅಟ್ಟಿಕೊಂಡು ಹೋಗಬೇಕು. ಆ ತಗ್ಗು ಉಳಿಮೆ ಮಾಡಿದ ಜಾಗವಾಗಿರಬಾರದು ಮತ್ತು ಆ ಸ್ಥಳದಲ್ಲಿ ಯಾವ ಸಸಿಯೂ ನೆಟ್ಟಿರಬಾರದು. ಅಲ್ಲಿ ಊರ ಹಿರಿಯರು ಆ ಹಸುವಿನ ಕುತ್ತಿಗೆ ಮುರಿಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅದನ್ನು ಎಂದಿಗೂ ವ್ಯವಸಾಯಕ್ಕೆ ಉಪಯೋಗಿಸದಂಥ ಅಥವಾ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.
Kannada BSI Bible 2016
ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ಹೋಗಿ ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.
Kannada Bible (KNCL) BSI 2016
ಎಂದಿಗೂ ವ್ಯವಸಾಯವಿಲ್ಲದಂಥ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ಹೋಗಿ ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಆ ಊರಿನ ಹಿರಿಯರು ಆ ಕಡಸನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜ ಹಾಕದಂಥ ಸ್ಥಳಕ್ಕೆ ತೆಗೆದುಕೊಂಡುಹೋಗಿ, ಅಲ್ಲಿ ಹಳ್ಳದಲ್ಲಿ ಕಡಸನ್ನು ವಧಿಸಬೇಕು.