Deuteronomy 21:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನೀನು ಇಸ್ರೇಲನ್ನು ರಕ್ಷಿಸಿರುವೆ, ನಾವು ನಿನ್ನ ಜನಗಳಾಗಿದ್ದೇವೆ. ಈಗ ನೀನು ನಮ್ಮನ್ನು ಶುದ್ಧೀಕರಿಸು; ನಿರ್ದೋಷಿಯ ಕೊಲೆಗೆ ನಮ್ಮನ್ನು ಕಾರಣರನ್ನಾಗಿ ಮಾಡಬೇಡ!’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷಮಿಸಬೇಕು; ಅನ್ಯಾಯವಾದ ನರಹತ್ಯದೋಷ ಫಲವು ನಿನ್ನ ಜನರಾದ ಇಸ್ರಾಯೇಲರಿಗೆ ತಗಲದಿರಲಿ” ಎಂದು ಹೇಳಬೇಕು.
Kannada BSI Bible 2016
ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷವಿುಸಬೇಕು; ಅನ್ಯಾಯವಾದ ನರಹತ್ಯದೋಷಫಲವು ನಿನ್ನ ಜನರಾದ ಇಸ್ರಾಯೇಲ್ಯರಿಗೆ ತಗಲದಿರಲಿ ಎಂದು ಹೇಳಬೇಕು.
Kannada Bible (KNCL) BSI 2016
ಸರ್ವೇಶ್ವರಾ, ನೀವು ಬಿಡುಗಡೆ ಮಾಡಿದ ನಿಮ್ಮ ಜನರನ್ನು ಕ್ಷಮಿಸಬೇಕು; ಅನ್ಯಾಯ ಆದ ನರಹತ್ಯ ದೋಷಫಲವು ನಿಮ್ಮ ಜನರಾದ ಇಸ್ರಯೇಲರಿಗೆ ತಗಲದಿರಲಿ’ ಎಂದು ಹೇಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನೀವು ವಿಮೋಚಿಸಿದ ನಿಮ್ಮ ಜನರಾದ ಇಸ್ರಾಯೇಲರಿಗೆ ಕರುಣೆ ಹೊದಿಸಿರಿ. ನಿಮ್ಮ ಜನರಾದ ಇಸ್ರಾಯೇಲರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡಿರಿ,” ಎಂದು ಹೇಳಬೇಕು. ಆ ರಕ್ತಾಪರಾಧವು ಅವರಿಗೆ ಮುಚ್ಚಲಾಗುವುದು.