Deuteronomy 22:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ನಾನು ಈಕೆಯನ್ನು ಮದುವೆಯಾದಾಗ ಈಕೆಯು ಕನ್ಯೆಯಲ್ಲವೆಂದು ನನಗೆ ತಿಳಿದುಬಂತು’ ಎಂದು ಜನರಿಗೆ ಸುಳ್ಳು ಹೇಳಿ ಆಕೆಯ ಮೇಲೆ ಸುಳ್ಳು ಅಪರಾಧ ಹೊರಿಸಿದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಇವಳೊಡನೆ ಸಂಗಮಿಸಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು” ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ,
Kannada BSI Bible 2016
ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟು ಅವಳ ಹೆಸರನ್ನು ಕೆಡಿಸಿ--ಈ ಹೆಂಗಸನ್ನು ನಾನು ತಕ್ಕೊಂಡು ಅವಳ ಬಳಿಗೆ ಬಂದಾಗ ಅವಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಹೇಳಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಕೂಡಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ
Kannada Bible (KNCL) BSI 2016
ಅವಳ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಹೇಳಿ ‘ನಾನು ಇವಳನ್ನು ಮದುವೆಮಾಡಿಕೊಂಡೆ; ಆದರೆ ಕೂಡಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು’ ಎಂದು ಹೇಳಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳ ಬಗ್ಗೆ ಇಲ್ಲ ಸಲ್ಲದ ಮಾತುಗಳನ್ನು ಹೇಳಿ, “ನಾನು ಇವಳನ್ನು ಮದುವೆ ಮಾಡಿಕೊಂಡೆ, ಆದರೆ ಕೂಡಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು,” ಎಂದು ಹೇಳಿ ಅವಳ ಮೇಲೆ ಆಪಾದನೆ ತರಬಹುದು.