Deuteronomy 22:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಪಶುವಿನ ಧಣಿ ಯಾರೆಂದು ನಿಮಗೆ ಗೊತ್ತಾಗದಿದ್ದರೆ ಅಥವಾ ಅವನು ನಿಮಗೆ ತುಂಬಾ ದೂರದಲ್ಲಿದ್ದರೆ ಅದರ ಧಣಿಯು ಅದನ್ನು ಹುಡುಕಿಕೊಂಡು ಬರುವ ತನಕ ನೀವು ಪಶುವನ್ನು ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಬೇಕು. ಅವನು ಬಂದಾಗ ಅದನ್ನು ಹಿಂದಿರುಗಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆ ಹೋದರೆ, ಆ ಪಶುವನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ಹಿಂತಿರುಗಿ ಕೊಡಬೇಕು.
Kannada BSI Bible 2016
ಆದರೆ ನಿನ್ನ ಸಹೋದರನು ನಿನಗೆ ಸವಿಾಪವಾಗಿರದೆ ಹೋದರೆ ಇಲ್ಲವೆ ಅವನ ಗುರುತು ನಿನಗೆ ತಿಳಿಯದೆ ಇದ್ದರೆ ತಪ್ಪಿ ಹೋದದ್ದನ್ನು ನಿನ್ನ ಮನೆಗೆ ಒಯ್ಯಬೇಕು; ನಿನ್ನ ಸಹೋದರನು ಅದನ್ನು ಹುಡುಕುವ ವರೆಗೆ ಅದು ನಿನ್ನ ಸಂಗಡ ಇರಬೇಕು; ತರುವಾಯ ಅದನ್ನು ಹಿಂದಕ್ಕೆ ಅವನಿಗೆ ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆಹೋದರೆ ಆ ಪಶುವನ್ನು ನಿಮ್ಮ ಮನೆಗೆ ಹೊಡಕೊಂಡು ಬಂದು ಕಾಯಬೇಕು; ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ತಿರಿಗಿ ಕೊಡಬೇಕು.
Kannada Bible (KNCL) BSI 2016
ಅವನು ನಿಮಗೆ ದೂರ ಆಗಿದ್ದರೆ, ಇಲ್ಲವೆ ಅವನು ಯಾರು ಎಂದು ನಿಮಗೆ ತಿಳಿಯದೆಹೋದರೆ, ಆ ಪ್ರಾಣಿಯನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು; ಅವನು ಅದನ್ನು ಹುಡುಕುತ್ತಾ ಬಂದಾಗ, ನೀವು ಅದನ್ನು ಅವನಿಗೆ ಮರಳಿಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನಿಮಗೆ ದೂರ ಆಗಿದ್ದರೆ, ಇಲ್ಲವೆ ಅವನು ಯಾರು ಎಂದು ನಿಮಗೆ ತಿಳಿಯದೆ ಹೋದರೆ, ಆ ಪ್ರಾಣಿಯನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ, ನೀವು ಅದನ್ನು ಅವನಿಗೆ ಮರಳಿ ಕೊಡಬೇಕು.