Deuteronomy 22:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಊರಹಿರಿಯರು ಆ ಹುಡುಗಿಯನ್ನು ಆಕೆಯ ತಂದೆಯ ಮನೆಬಾಗಿಲಿಗೆ ತರಬೇಕು. ಅಲ್ಲಿ ಊರಜನರು ಆಕೆಯನ್ನು ಕಲ್ಲೆಸೆದು ಸಾಯಿಸಬೇಕು. ಯಾಕೆಂದರೆ ಆಕೆಯು ಇಸ್ರೇಲಿನಲ್ಲಿ ನಾಚಿಕೆಕರವಾದ ಕೃತ್ಯವನ್ನು ನಡೆಸಿದ್ದಾಳೆ; ತನ್ನ ತಂದೆಯ ಮನೆಯಲ್ಲಿದ್ದುಕೊಂಡು ವೇಶ್ಯಾವೃತ್ತಿ ನಡಿಸಿದ್ದಾಳೆ. ಅಂಥಾ ಪಾಪವನ್ನು ನೀವು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.
Kannada BSI Bible 2016
ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಾಯೇಲ್ಯರೊಳಗೆ ದುರಾಚಾರವನ್ನು ನಡಿಸಿದ್ದರಿಂದ ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ತರಿಸಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
Kannada Bible (KNCL) BSI 2016
ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಯೇಲರಲ್ಲಿ ದುರಾಚಾರವನ್ನು ನಡೆಸಿದ್ದರಿಂದ ಅವಳನ್ನು ತಂದೆಯ ಮನೆಯ ಬಾಗಿಲಿಗೆ ಬರಮಾಡಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.