Deuteronomy 22:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
Kannada BSI Bible 2016
ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
Kannada Bible (KNCL) BSI 2016
ನೀವು ಅವರಿಬ್ಬರನ್ನೂ ಊರ ಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದುದರಿಂದ ಆ ಮಹಿಳೆಗೂ ಮರಣಶಿಕ್ಷೆ ಆಗಬೇಕು. ಹೀಗೆ ನೀವು ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಬ್ಬರನ್ನೂ ಆ ಪಟ್ಟಣದ ಬಾಗಿಲಿನ ಹೊರಗೆ ತಂದು, ಅವರು ಸಾಯುವ ಹಾಗೆ ಕಲ್ಲೆಸೆಯಬೇಕು. ಆ ಹುಡುಗಿಯು ಪಟ್ಟಣದಲ್ಲಿ ಇದ್ದರೂ, ಕೂಗದೆ ಇದ್ದದ್ದರಿಂದಲೂ, ಆ ಮನುಷ್ಯನು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.