Deuteronomy 22:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಹುಡುಗಿಗೆ ನೀವು ಏನನ್ನೂ ಮಾಡಬಾರದು. ಆಕೆ ಶಿಕ್ಷೆಗೆ ಅರ್ಹಳಾಗುವಂಥ ಕಾರ್ಯವೇನೂ ಮಾಡಲಿಲ್ಲ. ಒಬ್ಬನು ತನ್ನ ಸ್ನೇಹಿತನ ಮೇಲೆ ಆಕ್ರಮಣ ಮಾಡಿ ಕೊಂದಂತೆಯಷ್ಟೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಈ ಸಂಗತಿಯೂ ಹಾಗೆಯೇ ಎಂದು ತಿಳಿಯಬೇಕು.
Kannada BSI Bible 2016
ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವದು ಹೇಗೋ ಈ ಸಂಗತಿ ಹಾಗೆಯೇ ಆಯಿತು;
Kannada Bible (KNCL) BSI 2016
ಆ ಮಹಿಳೆಗೆ ಯಾವ ಶಿಕ್ಷೆಯೂ ಆಗಬಾರದು. ಅವಳಲ್ಲಿ ಮರಣಶಿಕ್ಷೆಗೆ ಪಾತ್ರ ಆದ ಅಪರಾಧವೇನೂ ಇಲ್ಲ. ಒಬ್ಬ ವ್ಯಕ್ತಿ ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಹಾಗೆಯೇ ಇದು ಕೂಡ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ.