Deuteronomy 22:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಹುಡುಗಿಯ ತಂದೆಗೆ ಇಪ್ಪತ್ತು ತೊಲ ಬೆಳ್ಳಿಯನ್ನು ಕೊಟ್ಟು ಆಕೆಯನ್ನು ತನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು. ಅವನು ಆಕೆಯನ್ನು ಮದುವೆಗಿಂತ ಮುಂಚೆ ಕೂಡಿದ್ದರಿಂದ ಅವನು ಆಕೆಯನ್ನು ಎಂದಿಗೂ ಬಿಟ್ಟುಬಿಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.
Kannada BSI Bible 2016
ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ ಅವಳ ತಂದೆಗೆ ಐವತ್ತು ರೂಪಾಯಿ ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವದಕ್ಕೆ ಅವನಿಗೆ ಅಧಿಕಾರವಿರುವದಿಲ್ಲ.
Kannada Bible (KNCL) BSI 2016
ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ ಅವಳ ತಂದೆಗೆ ಐವತ್ತು ಬೆಳ್ಳಿನಾಣ್ಯ ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗ ಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು, ಏಕೆಂದರೆ ಅವನು ಅವಳನ್ನು ಕೆಡಿಸಿದ್ದರಿಂದ, ಬದುಕುವ ದಿವಸಗಳೆಲ್ಲಾ ಅವಳನ್ನು ಪರಿತ್ಯಾಗಮಾಡಬಾರದು.