Deuteronomy 22:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ನೆರೆಯವನ ಕತ್ತೆಯಾಗಲಿ ಹಸುವಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೋಡಿದರೂ ನೋಡದಂತೆ ಹೋಗದೆ ಅದಕ್ಕೆ ಏಳಲು ಸಹಾಯ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ವದೇಶದವನ ಕತ್ತೆಯಾಗಲಿ ಅಥವಾ ಎತ್ತಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಕಾಣದವರಂತೆ ಹೋಗದೆ ಅವನಿಗೆ ಸಹಾಯಮಾಡಿ ಎಬ್ಬಿಸಬೇಕು.
Kannada BSI Bible 2016
ನೀನು ಕಾಣದವನಂತೆ ಇರಬಾರದು. ನಿನ್ನ ಸಹೋದರನ ಕತ್ತೆಯಾಗಲಿ ಎತ್ತಾಗಲಿ ಮಾರ್ಗ ದಲ್ಲಿ ಬಿದ್ದಿರುವದನ್ನು ನೋಡಿದರೆ ಅಲಕ್ಷ್ಯಮಾಡ ಬೇಡ; ಹೇಗಾದರೂ ಅವುಗಳನ್ನು ಎಬ್ಬಿಸುವದಕ್ಕೆ ಅವನಿಗೆ ಖಂಡಿತಾ ಸಹಾಯಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವದೇಶದವನ ಕತ್ತೆಯಾಗಲಿ ಎತ್ತಾಗಲಿ ದಾರಿಯಲ್ಲಿ ಬಿದ್ದಿರುವದನ್ನು ನೀವು ಕಂಡರೆ ಕಾಣದವರಂತೆ ಹೋಗದೆ ಅವನಿಗೆ ಸಹಾಯಮಾಡಿ ಎಬ್ಬಿಸಬೇಕು.
Kannada Bible (KNCL) BSI 2016
“ಸ್ವದೇಶದವನ ಕತ್ತೆಯಾಗಲಿ, ಎತ್ತಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಕಾಣದವರಂತೆ ಹೋಗದೆ, ಅದನ್ನು ಎಬ್ಬಿಸಲು ಅವನಿಗೆ ಸಹಾಯಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಸಹೋದರನ ಕತ್ತೆಯಾಗಲಿ, ಎತ್ತಾಗಲಿ, ಮಾರ್ಗದಲ್ಲಿ ಬಿದ್ದಿರುವುದನ್ನು ನೋಡಿದರೆ ಅಲಕ್ಷ್ಯ ಮಾಡಬೇಡ. ಅದನ್ನು ಎಬ್ಬಿಸಲು ಅವನಿಗೆ ಸಹಾಯಮಾಡಬೇಕು.