Deuteronomy 22:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಧಾನ್ಯವನ್ನು ಮತ್ತು ದ್ರಾಕ್ಷಾಲತೆಗಳನ್ನು ಒಂದೇ ಹೊಲದಲ್ಲಿ ಬೆಳೆಸಬಾರದು. ಯಾಕೆಂದರೆ ಅವೆರಡೂ ಚೆನ್ನಾಗಿ ಬೆಳೆಯದೆ ಫಲ ಕೊಡದೆ ಹೋಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು ದೇವರಿಗೆ ಸಮರ್ಪಿಸಬೇಕು.
Kannada BSI Bible 2016
ನಿನ್ನ ದ್ರಾಕ್ಷೇತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜದ ಪೈರೂ ದ್ರಾಕ್ಷೇತೋಟದ ಹುಟ್ಟುವಳಿಯೂ ಅಶುದ್ಧವಾಗು ವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ರಾಕ್ಷೇತೋಟಗಳಲ್ಲಿ ಬೇರೆ ವಿಧವಾದ ಬಿತ್ತನೆ ಮಾಡಬಾರದು; ಹಾಗೆ ಮಾಡಿದರೆ ಆ ಬೆಳೆಯೂ ಮತ್ತು ದ್ರಾಕ್ಷೆಯ ಬೆಳೆಯೂ ಅಂತೂ ಆ ತೋಟದ ಎಲ್ಲಾ ಬೆಳೆಯೂ ದೇವರದಾಗುವದು.
Kannada Bible (KNCL) BSI 2016
“ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬಿತ್ತನೆ ಮಾಡಬಾರದು; ಹಾಗೆ ಮಾಡಿದರೆ ಆ ಬೆಳೆಗೂ ಮತ್ತು ದ್ರಾಕ್ಷಿಬೆಳೆಗೂ ಹೀಗೆ ಆ ತೋಟದ ಬೆಳೆಗೂ ಗತಿಕೇಡಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ದ್ರಾಕ್ಷಿತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜವೂ, ಬಿತ್ತಿದ ಬೀಜದ ಪೈರೂ, ದ್ರಾಕ್ಷಿತೋಟದ ಹುಟ್ಟುವಳಿಯೂ ಅಶುದ್ಧವಾಗುವುದು.