Deuteronomy 23:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯ ಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.
Kannada BSI Bible 2016
ನಿನ್ನ ದೇವರಾದ ಕರ್ತನು ನಿನ್ನನ್ನು ರಕ್ಷಿಸುವದಕ್ಕೂ ನಿನ್ನ ಶತ್ರುಗಳನ್ನು ನಿನ್ನ ಮುಂದೆ ಒಪ್ಪಿಸಿಬಿಡುವದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾನೆ. ಆತನು ನಿನ್ನಲ್ಲಿ ಅಶುದ್ಧವಾದ ಕಾರ್ಯ ವನ್ನು ನೋಡಿ ನಿನ್ನನ್ನು ಬಿಟ್ಟು ತಿರುಗದ ಹಾಗೆ ನಿನ್ನ ಪಾಳೆಯವು ಪರಿಶುದ್ಧವಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವದಕ್ಕೂ ಶತ್ರುಗಳನ್ನು ನಿಮ್ಮ ಕೈವಶಮಾಡುವದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದದರಿಂದ ಪಾಳೆಯವು ನಿರ್ಮಲವಾಗಿರಬೇಕು; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.
Kannada Bible (KNCL) BSI 2016
ನಿಮ್ಮ ದೇವರಾದ ಸರ್ವೇಶ್ವರಾ ನಿಮ್ಮನ್ನು ಕಾಪಾಡಲು, ಶತ್ರುಗಳನ್ನು ನಿಮ್ಮ ಕೈವಶಮಾಡಲು ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾರೆ; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಅವರು ನಿಮ್ಮನ್ನು ಬಿಟ್ಟುಹೋಗದಂತೆ ಪಾಳೆಯವು ನಿರ್ಮಲವಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಕ್ಷಿಸುವುದಕ್ಕೂ, ನಿಮ್ಮ ಶತ್ರುಗಳನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವುದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾರೆ. ಅವರು ನಿಮ್ಮಲ್ಲಿ ಅಶುದ್ಧವಾದ ಕಾರ್ಯವನ್ನು ನೋಡಿ, ನಿಮ್ಮನ್ನು ಬಿಟ್ಟು ತಿರುಗಿಹೋಗದಂತೆ ನಿಮ್ಮ ಪಾಳೆಯವು ನಿರ್ಮಲವಾಗಿರಬೇಕು.