Deuteronomy 23:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.
Kannada BSI Bible 2016
ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೂಳೆತನದಿಂದಾಗಲಿ ಗುದಮೈಥುನದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಮಂದಿರದೊಳಗೆ ತರಲೇಬಾರದು; ಈ ಎರಡೂ ಆತನಿಗೆ ಅಸಹ್ಯ.
Kannada Bible (KNCL) BSI 2016
ಸೂಳೆತನದಿಂದಾಗಲಿ ಜಾರತ್ವದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಸರ್ವೇಶ್ವರನ ಮಂದಿರದೊಳಗೆ ತರಲೇಬಾರದು; ಈ ಎರಡೂ ಅವರಿಗೆ ಅಸಹ್ಯವಾದುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯು ಸೂಳೆಗಾರಿಕೆಯಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ದೇವ ಮಂದಿರದೊಳಗೆ ತರಬಾರದು. ಏಕೆಂದರೆ ಅವೆರಡನ್ನು ನಿನ್ನ ದೇವರಾದ ಯೆಹೋವ ದೇವರು ದ್ವೇಷಿಸುತ್ತಾರೆ.