Deuteronomy 23:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪರದೇಶಸ್ಥರಿಗೆ ನೀವು ಬಡ್ಡಿಗೆ ಸಾಲ ಕೊಡಬಹುದು. ಆದರೆ ಸ್ವದೇಶದವನಾದ ಇಸ್ರೇಲಿನವನಿಗೆ ಬಡ್ಡಿಗೆ ಸಾಲ ಕೊಡಬಾರದು. ನೀವು ಹೀಗೆ ಮಾಡಿದ್ದಲ್ಲಿ, ನೀವು ಹೋಗಿ ನೆಲೆಸುವ ದೇಶದಲ್ಲಿ ನೀವು ಮಾಡುವ ಪ್ರತಿಯೊಂದರಲ್ಲೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.
Kannada BSI Bible 2016
ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಹೊಂದುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.
Kannada Bible (KNCL) BSI 2016
ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಕೈಗೂಡಿಸಿ ಅಭಿವೃದ್ಧಿಪಡಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸಹೋದರನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ನಾಡಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೆಲಸಗಳನ್ನು ಆಶೀರ್ವದಿಸುತ್ತಾರೆ.