Deuteronomy 23:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ನಿಮ್ಮ ದೇವರಾದ ಯೆಹೋವನಿಗೆ ಹರಕೆ ಹೊತ್ತರೆ ಅದನ್ನು ಸಲ್ಲಿಸಲು ನಿಧಾನ ಮಾಡಬೇಡಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮಿಂದ ಕೇಳುವವನಾಗಿದ್ದಾನೆ. ಹರಕೆ ಹೊತ್ತು ಸಲ್ಲಿಸದಿದ್ದರೆ ನೀವು ಪಾಪಮಾಡುವವರಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.
Kannada BSI Bible 2016
ನೀನು ನಿನ್ನ ದೇವರಾದ ಕರ್ತನಿಗೆ ಪ್ರಮಾಣ ಮಾಡಿದ ಮೇಲೆ ಅದನ್ನು ಸಲ್ಲಿಸುವದಕ್ಕೆ ತಡಮಾಡ ಬೇಡ; ನಿನ್ನ ದೇವರಾದ ಕರ್ತನು ಅದನ್ನು ನಿಶ್ಚಯ ವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವನು; ಅದು ನಿನ್ನಲ್ಲಿ ಪಾಪವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವದು ಪಾಪ.
Kannada Bible (KNCL) BSI 2016
“ನಿಮ್ಮ ದೇವರಾದ ಸರ್ವೇಶ್ವರನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅವರು ತಪ್ಪದೆ ಅದನ್ನು ವಿಚಾರಿಸುವರು; ತೀರಿಸದೆ ಹೋಗುವುದು ಪಾಪ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನಿನ್ನ ದೇವರಾದ ಯೆಹೋವ ದೇವರಿಗೆ ಹರಕೆಮಾಡಿದ ಮೇಲೆ ಅದನ್ನು ಸಲ್ಲಿಸುವುದಕ್ಕೆ ತಡಮಾಡಬೇಡ. ಏಕೆಂದರೆ ನಿನ್ನ ದೇವರಾದ ಯೆಹೋವ ದೇವರು ಅದನ್ನು ನಿಶ್ಚಯವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವರು. ತೀರಿಸದೆ ಹೋಗುವದು ಪಾಪ.