Deuteronomy 23:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ಇಸ್ರೇಲರು ಈಜಿಪ್ಟಿನಿಂದ ಹೊರಟುಬಂದು ಪ್ರಯಾಣದಲ್ಲಿದ್ದಾಗ ಅವರಿಗೆ ರೊಟ್ಟಿಯನ್ನಾಗಲಿ ನೀರನ್ನಾಗಲಿ ಕೊಡಲು ಅವರು ನಿರಾಕರಿಸಿದ್ದರು. ಅವರು ಮೆಸಪೊಟೋಮಿಯದಿಂದ ಬಿಳಾಮನನ್ನು ಕರೆಸಿ ಇಸ್ರೇಲರನ್ನು ಶಪಿಸುವಂತೆ ಬಲವಂತಪಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.
Kannada BSI Bible 2016
ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ನೀವು ಐಗುಪ್ತದೇಶದಿಂದ ಬಂದಾಗ [ಅಮ್ಮೋನಿಯರು] ಅನ್ನ ಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; [ಮೋವಾಬ್ಯರು] ನಿಮ್ಮನ್ನು ಶಪಿಸುವದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣ ಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾವಿುನ ಪೆತೋರೂರಿನಿಂದ ಅವನನ್ನು ಕರಿಸಿದರು.
Kannada Bible (KNCL) BSI 2016
ಏಕೆಂದರೆ ನೀವು ಈಜಿಪ್ಟ್ ದೇಶದಿಂದ ಬಂದಾಗ ಅವರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರೂರಿನಿಂದ ಅವನನ್ನು ಕರೆಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೀವು ಈಜಿಪ್ಟನ್ನು ಬಿಟ್ಟು ಬರುವಾಗ, ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವುದಕ್ಕೆ ಎದುರುಗೊಳ್ಳಲಿಲ್ಲ. ನಿಮ್ಮನ್ನು ಶಪಿಸುವುದಕ್ಕೆ ಮೆಸೊಪೊತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ಬಿಳಾಮನಿಗೆ ಕೂಲಿ ಕೊಟ್ಟು ನಿಮಗೆ ವಿರೋಧವಾಗಿ ಕರೆಸಿದರು.