Deuteronomy 23:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೆಹೋವನು ನಿಮ್ಮನ್ನು ಪ್ರೀತಿಸುತ್ತಿದ್ದುದರಿಂದ ಆ ಶಾಪವನ್ನು ನಿಮಗೆ ಆಶೀರ್ವಾದವಾಗಿ ಪರಿವರ್ತಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.
Kannada BSI Bible 2016
ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
(ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.)
Kannada Bible (KNCL) BSI 2016
ಆದರೂ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ, ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸಲಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.