Deuteronomy 24:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬಾಕೆಯನ್ನು ಒಬ್ಬನು ಮದುವೆಯಾದ ಬಳಿಕ, ಅವಳಲ್ಲಿ ನಾಚಿಕೆಕರವಾದದ್ದೇನಾದರೂ ಇದ್ದರೆ ಅವನು ವಿವಾಹವಿಚ್ಛೇದನಾ ಪತ್ರಗಳಿಗೆ ಸಹಿಹಾಕಿ ಅವಳ ಕೈಯಲ್ಲಿ ಕೊಡಬೇಕು. ಆಮೇಲೆ ಆಕೆಯನ್ನು ತನ್ನ ಮನೆಯಿಂದ ಹೊರಗೆ ಕಳುಹಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.
Kannada BSI Bible 2016
ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಿಬಿಟ್ಟಾಗ
Kannada Bible (KNCL) BSI 2016
“ಒಬ್ಬನು ತಾನು ಮದುವೆಮಾಡಿಕೊಂಡ ಮಹಿಳೆಯಲ್ಲಿ ಏನೋ ಅವಲಕ್ಷಣವನ್ನು ಕಂಡು, ಅವಳಲ್ಲಿ ಸಂತೋಷಪಡದೆ, ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಿಬಿಟ್ಟನೆಂದು ಇಟ್ಟುಕೊಳ್ಳೋಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ತಾನು ಮದುವೆಮಾಡಿಕೊಂಡ ಮಹಿಳೆಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಅಸಂತೃಪ್ತನಾದರೆ, ವಿವಾಹ ವಿಚ್ಛೇದನ ಪತ್ರವನ್ನು ಬರೆದು, ಅವಳ ಕೈಯಲ್ಲಿ ಕೊಟ್ಟು, ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಟ್ಟಾಗ,