Deuteronomy 24:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೂರ್ಯ ಮುಳುಗುವುದರೊಳಗೆ ಅವನಿಗೆ ಸಲ್ಲಬೇಕಾದ ಕೂಲಿಯನ್ನು ಕೊಟ್ಟುಬಿಡು, ಅವನು ಬಡವನಾಗಿದ್ದಾನೆ. ನೀನು ಕೊಡುವ ಕೂಲಿಯಿಂದಲೇ ಅವನು ತನ್ನ ಹಸಿವನ್ನು ನೀಗಿಸಿಕೊಳ್ಳಬೇಕು. ನೀನು ಅವನ ಕೂಲಿ ಕೊಡದಿದ್ದಲ್ಲಿ ಅವನು ದೇವರಾದ ಯೆಹೋವನಿಗೆ ದೂರು ಹೇಳುವನು. ಆಗ ನೀನು ಪಾಪಮಾಡುವವನಾಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏನೂ ಅನ್ಯಾಯಮಾಡದೆ ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಣುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರುನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.
Kannada BSI Bible 2016
ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತು ಮುಣುಗುವದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.
Kannada Bible (KNCL) BSI 2016
ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಳುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಟ್ಟುಬಿಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ ಅವನು ಸರ್ವೇಶ್ವರನಿಗೆ ಮೊರೆಯಿಡುವನು; ಆಗ ನೀವು ದೋಷಿಗಳಾಗುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ದಿನದ ಕೂಲಿಯನ್ನು ಆ ದಿನದಲ್ಲೇ ಸೂರ್ಯನು ಮುಳುಗುವುದರೊಳಗೆ ಅವನಿಗೆ ಕೊಡಬೇಕು. ಏಕೆಂದರೆ ಅವನು ಬಡವನಾಗಿದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ, ಅವನು ನಿನಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆಯಿಡುವನು. ಆಗ ನಿನ್ನ ಮೇಲೆ ಪಾಪದ ಹೊರೆ ಬಿದ್ದೀತು.