Deuteronomy 24:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ಹೊಲದಲ್ಲಿ ಬೆಳೆದ ಬೆಳೆಯನ್ನು ಕೊಯ್ದು ಮನೆಗೆ ತರುವಾಗ ಕೆಲವು ಸಿವುಡುಗಳನ್ನು ನೀವು ಹೊಲದಲ್ಲಿಯೇ ಬಿಟ್ಟು ಬಂದಿದ್ದರೆ ಅದನ್ನು ತರಲು ಹಿಂದಕ್ಕೆ ಹೋಗಬೇಡಿ. ಅದನ್ನು ನಿಮ್ಮ ಊರಿನಲ್ಲಿರುವ ಅನಾಥರಿಗೂ ವಿಧವೆಯರಿಗೂ ಪರದೇಶಸ್ಥರಿಗೂ ಬಿಡಿರಿ. ನೀವು ಹಾಗೆ ಮಾಡಿದರೆ ದೇವರಾದ ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.
Kannada BSI Bible 2016
ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತು ಬಂದರೆ ಅದನ್ನು ತರುವದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.
Kannada Bible (KNCL) BSI 2016
“ನೀವು ಬೆಳೆಯನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರಲು ಹಿಂದಕ್ಕೆ ಹೋಗಬಾರದು; ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅದನ್ನು ಬಿಟ್ಟುಬಿಡಿ; ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲಿ ಕೈಗೂಡಿಸಿ ನಿಮ್ಮನ್ನು ಅಭಿವೃದ್ಧಿಪಡಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ, ಹೊಲದಲ್ಲಿ ಸಿವುಡನ್ನು ಮರೆತುಬಿಟ್ಟರೆ, ಅದನ್ನು ತೆಗೆದುಕೊಳ್ಳುವುದಕ್ಕೆ ತಿರುಗಿಕೊಳ್ಳಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. ನೀವು ಹೀಗೆ ನಡೆದುಕೊಂಡರೆ, ನಿನ್ನ ದೇವರಾದ ಯೆಹೋವ ದೇವರು ನಿನ್ನ ಎಲ್ಲಾ ದುಡಿಮೆಯಲ್ಲಿ ನಿನ್ನನ್ನು ಆಶೀರ್ವದಿಸುವರು.