Deuteronomy 24:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 3
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ತನ್ನ ಹೆಂಡತಿಯಾಗಿ ಸ್ವೀಕರಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಸ್ವೀಕರಿಸುವುದು ಯೆಹೋವನಿಗೆ ಅಸಹ್ಯ ಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶಕೊಡಬಾರದು.
Kannada BSI Bible 2016
ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ಪರಿಗ್ರಹಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಪರಿಗ್ರಹಿಸುವದು ಯೆಹೋವನಿಗೆ ಹೇಯಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶ ಕೊಡಬಾರದು.
Kannada Bible (KNCL) BSI 2016
ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡ ಅವಳನ್ನು ಪುನಃ ಪರಿಗ್ರಹಿಸಬಾರದು; ಅವಳು ಅಶುದ್ಧಳಾದವಳು; ಅವಳನ್ನು ಪುನಃ ಪರಿಗ್ರಹಿಸುವುದು ಸರ್ವೇಶ್ವರನಿಗೆ ಹೇಯಕಾರ್ಯ. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿಗೆ ದೋಷವುಂಟಾಗಲು ಅವಕಾಶಕೊಡಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡ ಅವಳನ್ನು ಪುನಃ ಹೆಂಡತಿಯಾಗಿ ಸ್ವೀಕರಿಸಬಾರದು. ಅದು ಯೆಹೋವ ದೇವರ ಮುಂದೆ ಅಸಹ್ಯವೇ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ದೋಷವುಂಟಾಗಲು ಅವಕಾಶ ಕೊಡಬಾರದು.