Deuteronomy 24:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನು ಹೊಸದಾಗಿ ಮದುವೆಯಾಗಿದ್ದಲ್ಲಿ ಅವನನ್ನು ಸೈನ್ಯಕ್ಕೆ ಕಳುಹಿಸಬಾರದು; ವಿಶೇಷವಾದ ಜವಾಬ್ದಾರಿಯನ್ನು ಅವನಿಗೆ ಕೊಡಬಾರದು. ಒಂದು ವರ್ಷ ಅವನು ಮನೆಯಲ್ಲಿದ್ದುಕೊಂಡು ತನ್ನ ಹೆಂಡತಿಯನ್ನು ಸಂತೋಷಪಡಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದ ವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.
Kannada BSI Bible 2016
ಒಬ್ಬನು ಹೊಸದಾಗಿ ಹೆಂಡತಿಯನ್ನು ತಕ್ಕೊಂಡರೆ ಯುದ್ಧಕ್ಕೆ ಹೊರಡಬಾರದು; ಅವನಿಂದ ಯಾವ ದೊಂದೂ ಕೆಲಸವನ್ನು ಮಾಡಿಸಬಾರದು; ಅವನು ಒಂದು ವರುಷ ಬಿಡುಗಡೆಯಾಗಿ ತನ್ನ ಮನೆಯಲ್ಲಿದ್ದು ತಾನು ತಕ್ಕೊಂಡ ಹೆಂಡತಿಯನ್ನು ಸಂತೋಷ ಪಡಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇವಿುಸಬಾರದು; ಅವನು ಒಂದು ವರುಷದವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.
Kannada Bible (KNCL) BSI 2016
“ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನು ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದವರೆಗೆ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು, ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ಹೊಸದಾಗಿ ಮದುವೆಯಾಗಿದ್ದರೆ, ಅವನನ್ನು ಯುದ್ಧಕ್ಕೆ ಕಳುಹಿಸಬಾರದು ಅಥವಾ ಜವಾಬ್ದಾರಿಯ ಯಾವುದೊಂದೂ ಕೆಲಸವನ್ನು ಅವನಿಂದ ಮಾಡಿಸಬಾರದು. ಅವನು ಒಂದು ವರ್ಷ ಸ್ವತಂತ್ರನಾಗಿ ತನ್ನ ಮನೆಯಲ್ಲಿದ್ದು, ತಾನು ಮದುವೆಯಾದ ಹೆಂಡತಿಯೊಡನೆ ಸುಖವಾಗಿರಲಿ.