Deuteronomy 24:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನು ಇನ್ನೊಬ್ಬ ಇಸ್ರೇಲನನ್ನು ಕದ್ದುಕೊಂಡು ಹೋಗಿ ಅವನನ್ನು ಗುಲಾಮನನ್ನಾಗಿ ಮಾರಬಾರದು. ಹಾಗೆ ಮಾಡಿದವರನ್ನು ಸಾಯಿಸಬೇಕು. ನಿಮ್ಮ ಕುಲದಿಂದ ಅಂಥಾ ಪಾಪವನ್ನು ತೆಗೆದುಹಾಕಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.
Kannada BSI Bible 2016
ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಸ್ವದೇಶದವನಾದ ಇಸ್ರಾಯೇಲ್ಯನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಮಾರಿಬಿಟ್ಟದ್ದಾಗಲಿ ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.
Kannada Bible (KNCL) BSI 2016
“ಒಬ್ಬನು ಸ್ವದೇಶದವನಾದ ಇಸ್ರಯೇಲನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಿಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ತನ್ನ ಸಹೋದರರಾದ ಇಸ್ರಾಯೇಲರಲ್ಲಿ ಒಬ್ಬನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ನಡುವೆಯಿಂದ ತೆಗೆದುಹಾಕಬೇಕು.