Deuteronomy 25:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಸರಿಯಾದ ತೂಕದ ಕಲ್ಲುಗಳನ್ನು ಉಪಯೋಗಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಬಹುಕಾಲ ಬಾಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.
Kannada BSI Bible 2016
ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.
Kannada Bible (KNCL) BSI 2016
ನಿಮ್ಮ ತೂಕದ ಬಟ್ಟೂ, ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನಲ್ಲಿ ಬಹುಕಾಲ ಬಾಳುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತೂಕದ ಕಲ್ಲೂ, ಅಳತೆಯ ಸೇರೂ, ಸರಿಯಾಗಿಯೂ ನ್ಯಾಯವಾಗಿಯೂ ಇರಬೇಕು. ಆಗ ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುತ್ತವೆ.