Deuteronomy 25:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬನಿಗೆ ನಲವತ್ತು ಕೊರಡೆ ಏಟುಗಳಿಗಿಂತ ಹೆಚ್ಚಾಗಿ ಹೊಡೆಯಬಾರದು. ಅದಕ್ಕಿಂತ ಹೆಚ್ಚು ಹೊಡೆದರೆ ಅವನ ಪ್ರಾಣವು ನಿಮ್ಮ ದೃಷ್ಟಿಗೆ ಅಮೂಲ್ಯವಾಗಿಲ್ಲವೆಂದು ತಿಳಿದುಬರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೆಟ್ಟುಗಳ ಶಿಕ್ಷೆಯು ನಲ್ವತ್ತಕ್ಕಿಂತ ಹೆಚ್ಚಿರಬಾರದು. ಅದಕ್ಕಿಂತ ಹೆಚ್ಚು ಪೆಟ್ಟುಗಳನ್ನು ನೀವು ಹೊಡಿಸಿದರೆ ನಿಮ್ಮ ಸ್ವದೇಶದವನನ್ನು ನೀವು ಕೇವಲ ನೀಚನನ್ನಾಗಿ ಕಂಡಂತೆ ಆಗುವುದು.
Kannada BSI Bible 2016
ನಾಲ್ವತ್ತು ಏಟು ಅವನಿಗೆ ಹೊಡಿಸಬಹುದು, ಹೆಚ್ಚಲ್ಲ ಇದಕ್ಕಿಂತ ಹೆಚ್ಚು. ಅವನಿಗೆ ಬಹಳ ಏಟುಗಳನ್ನು ಹೊಡೆದರೆ ನಿನ್ನ ಸಹೋದರನು ನಿನ್ನ ಕಣ್ಣುಗಳಿಗೆ ನೀಚನೆಂದು ಕಾಣಿಸಾನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೆಟ್ಟುಗಳ ಶಿಕ್ಷೆಯು ನಾಲ್ವತ್ತಕ್ಕಿಂತ ಹೆಚ್ಚಿರಬಾರದು. ಅಷ್ಟಕ್ಕಿಂತ ಮೀರಿ ನೀವು ಹೆಚ್ಚು ಪೆಟ್ಟುಗಳನ್ನು ಹೊಡಿಸಿದರೆ ನಿಮ್ಮ ಸ್ವದೇಶದವನು ನಿಮಗೆ ಕೇವಲ ನೀಚನಾಗಿ ಕಾಣಿಸಾನು.
Kannada Bible (KNCL) BSI 2016
ಪೆಟ್ಟುಗಳ ಶಿಕ್ಷೆ ನಾಲ್ವತ್ತಕ್ಕಿಂತ ಹೆಚ್ಚಿರಬಾರದು. ಅಷ್ಟಕ್ಕಿಂತ ಮೀರಿ ನೀವು ಹೆಚ್ಚು ಪೆಟ್ಟುಗಳನ್ನು ಹೊಡಿಸಿದರೆ ನಿಮ್ಮ ಸ್ವದೇಶದವನನ್ನು ಕೇವಲ ನೀಚನನ್ನಾಗಿ ನೀವು ಕಂಡಂತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೆಟ್ಟಿನ ಶಿಕ್ಷೆ ನಲವತ್ತಕ್ಕಿಂತ ಹೆಚ್ಚಿರಬಾರದು. ಅಷ್ಟಕ್ಕಿಂತ ಮೀರಿ ನೀವು ಹೆಚ್ಚುಪೆಟ್ಟುಗಳನ್ನು ಹೊಡಿಸಿದರೆ, ನಿಮ್ಮ ಸ್ವದೇಶದವನನ್ನು ಕೇವಲ ನೀಚನನ್ನಾಗಿ ನೀವು ಕಂಡಂತಾಗುವುದು.