Deuteronomy 25:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಬ್ಬರು ಅಣ್ಣತಮ್ಮಂದಿರು ಜೀವಿಸುತ್ತಿರುವಾಗ ಒಬ್ಬನು ಮಕ್ಕಳಿಲ್ಲದೆ ಸತ್ತುಹೋದರೆ ಅವನ ಹೆಂಡತಿಯು ಕುಟುಂಬದಿಂದ ಹೊರಗೆ ಮದುವೆಯಾಗಬಾರದು. ಅವಳ ಮೈದುನ ಆಕೆಯನ್ನು ಮದುವೆಯಾಗಿ, ತನ್ನ ಮೈದುನ ಧರ್ಮವನ್ನು ನೆರವೇರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು.
Kannada BSI Bible 2016
ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಣ್ಣ ತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನ ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನ ಧರ್ಮವನ್ನು ನೆರವೇರಿಸಬೇಕು.
Kannada Bible (KNCL) BSI 2016
“ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ ಅವನ ಹೆಂಡತಿ ಬೇರೆ ಪುರುಷನನ್ನು ಮದುವೆ ಆಗಬಾರದು. ಅವಳ ಮೈದುನ ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನ ಧರ್ಮವನ್ನು ನೆರವೇರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಹೋದರರು ಕೂಡಿ ವಾಸಮಾಡುವಾಗ, ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಆ ಸತ್ತವನ ಹೆಂಡತಿ ಮನೆಬಿಟ್ಟು ಅನ್ಯನನ್ನು ಮದುವೆಯಾಗಬಾರದು. ಗಂಡನ ಸಹೋದರನು ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನನ ಕರ್ತವ್ಯವನ್ನು ಪೂರೈಸಬೇಕು.