Deuteronomy 25:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವಳಿಗೆ ಅವನಿಂದ ಹುಟ್ಟುವ ಮೊದಲನೆಯ ಮಗು ಅವಳ ಮೊದಲನೆಯ ಗಂಡನಿಗೆ ಸೇರಿದ್ದೆಂದು ಪರಿಗಣಿಸಲ್ಪಡಬೇಕು. ಹೀಗೆ ಸತ್ತುಹೋದ ಅಣ್ಣನ ವಂಶವು ಮುಂದುವರಿಯುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳಲ್ಲಿ ಹುಟ್ಟುವ ಚೊಚ್ಚಲಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು. ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರೊಳಗಿಂದ ಅಳಿಸಿ ಹೋಗುವುದಿಲ್ಲ.
Kannada BSI Bible 2016
ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳಲ್ಲಿ ಹುಟ್ಟುವ ಚೊಚ್ಚಲುಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು; ಹೀಗೆ ಆಗುವದರಿಂದ ಸತ್ತವನ ಹೆಸರು ಇಸ್ರಾಯೇಲ್ಯರೊಳಗಿಂದ ನಾಶವಾಗಿ ಹೋಗುವದಿಲ್ಲ.
Kannada Bible (KNCL) BSI 2016
ಅವಳಲ್ಲಿ ಹುಟ್ಟುವ ಚೊಚ್ಚಲುಮಗನನ್ನು ಸತ್ತವನ ಮಗನೆಂದೇ ಎಣಿಸಬೇಕು; ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಯೇಲರಲ್ಲಿ ಅಳಿದು ಹೋಗುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಹೆರುವ ಚೊಚ್ಚಲ ಮಗನನ್ನು ಸತ್ತವನ ಮಗನೆಂದೇ ಎಣಿಸಬೇಕು, ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರಲ್ಲಿ ಅಳಿದುಹೋಗುವುದಿಲ್ಲ.