Deuteronomy 25:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಮೈದುನನು, ಸತ್ತುಹೋದ ತನ್ನ ಅಣ್ಣನ ಸ್ಥಾನವನ್ನು ತೆಗೆದುಕೊಳ್ಳಲು ಇಷ್ಟಪಡದೆಹೋದಲ್ಲಿ, ಆಕೆಯು ಊರಿನ ಹಿರಿಯರ ಬಳಿಗೆ ಹೋಗಿ ಹಿರಿಯರಿಗೆ ಹೀಗೆ ಹೇಳಬೇಕು: ‘ನನ್ನ ಮೈದುನನು ತನ್ನ ಅಣ್ಣನ ಹೆಸರನ್ನು ಇಸ್ರೇಲಿನಲ್ಲಿ ಉಳಿಸಲು ಇಷ್ಟಪಡುವುದಿಲ್ಲ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸದೆ ಹೋದರೆ ಅವಳು ಊರ ಬಾಗಿಲಿಗೆ ಹೋಗಿ ಅಲ್ಲಿಯ ಹಿರಿಯರಿಗೆ, “ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸುವುದಕ್ಕೆ ಸಿದ್ಧನಿಲ್ಲ. ಅವನು ಮೈದುನಧರ್ಮವನ್ನು ನಡೆಸುವುದಿಲ್ಲ ಅನ್ನುತ್ತಾನೆ” ಎಂದು ತಿಳಿಸಬೇಕು.
Kannada BSI Bible 2016
ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸಲೊಲ್ಲದೆ ಹೋದರೆ ಅವಳು ಚಾವಡಿಗೆ ಹೋಗಿ ಹಿರಿಯರಿಗೆ - ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸಲೊಲ್ಲನು; ಮೈದುನ ಧರ್ಮವನ್ನು ನಡಿಸುವದಿಲ್ಲ ಅನ್ನುತ್ತಾನೆ ಎಂದು ತಿಳಿಸಬೇಕು.
Kannada Bible (KNCL) BSI 2016
ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸಲೊಲ್ಲದೆ ಹೋದರೆ ಅವಳು ಚಾವಡಿಗೆ ಹೋಗಿ ಹಿರಿಯರಿಗೆ, ‘ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸಲೊಲ್ಲನು; ಮೈದುನ ಧರ್ಮವನ್ನು ನಡಿಸುವುದಿಲ್ಲ ಎನ್ನುತ್ತಾನೆ’ ಎಂದು ತಿಳಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತೆಗೆದುಕೊಳ್ಳವ ಮನಸ್ಸಿಲ್ಲದಿದ್ದರೆ, ಅತ್ತಿಗೆಯು ಚಾವಡಿಗೆ ಹೋಗಿ ಹಿರಿಯರ ಹತ್ತಿರ ಬಂದು, “ನನ್ನ ಗಂಡನ ಸಹೋದರನು ತನ್ನ ಸಹೋದರನ ಹೆಸರನ್ನು ಇಸ್ರಾಯೇಲಿನಲ್ಲಿ ಮುಂದುವರಿಸಲು ಸಿದ್ಧನಿಲ್ಲ. ಅವನು ತನ್ನ ಮೈದುನನ ಕರ್ತವ್ಯವನ್ನು ನಡೆಸಲು ಮನಸ್ಸಿಲ್ಲದವನಾಗಿದ್ದಾನೆ,” ಎಂದು ಹೇಳಬೇಕು.