Deuteronomy 26:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ, ಯೆಹೋವನೇ, ನೀನು ಕೊಟ್ಟ ದೇಶದಲ್ಲಿ ಬೆಳೆದ ಬೆಳೆಯಲ್ಲಿ ಪ್ರಥಮ ಫಲಗಳನ್ನು ತಂದಿದ್ದೇನೆ.’ “ಆ ಪ್ರಥಮ ಬೆಳೆಯನ್ನು ನಿಮ್ಮ ದೇವರಾದ ಯೆಹೋವನ ಮುಂದೆ ಸುರಿದು ಆರಾಧಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ, ಅದನ್ನು ಸ್ವೀಕರಿಸಬೇಕು” ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು.
Kannada BSI Bible 2016
ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂವಿುಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ; ಸ್ವೀಕರಿಸಬೇಕು ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು.
Kannada Bible (KNCL) BSI 2016
ಆದುದರಿಂದ ಸರ್ವೇಶ್ವರಾ, ನೀವು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ; ಸ್ವೀಕರಿಸಬೇಕು’ ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿಟ್ಟು ಅವರನ್ನು ಆರಾಧಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ಯೆಹೋವ ದೇವರೇ, ನೀವು ನಮಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿದ್ದೇವೆ,” ಎಂದು ಹೇಳಬೇಕು. ಆಗ ಅದನ್ನು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿಟ್ಟು, ಅವರನ್ನು ಆರಾಧಿಸಬೇಕು.