Deuteronomy 26:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವೂ ನಿಮ್ಮ ಹೆಂಡತಿ ಮಕ್ಕಳೂ ಸೇರಿ ಅಲ್ಲಿ ಊಟಮಾಡಿ ಸಂತೋಷಿಸಬೇಕು. ನಿಮ್ಮ ಊರಿನಲ್ಲಿರುವ ಲೇವಿಯರೊಂದಿಗೆ ಮತ್ತು ಪರದೇಶಸ್ಥರೊಂದಿಗೆ ನಿಮ್ಮ ಪ್ರಥಮ ಫಲಗಳನ್ನು ಹಂಚಿಕೊಳ್ಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನಿಮಗೂ ಮತ್ತು ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ, ಲೇವಿಯರೂ ಮತ್ತು ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.
Kannada BSI Bible 2016
ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನಿಮಗೂ ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ ಲೇವಿಯರೂ ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.
Kannada Bible (KNCL) BSI 2016
ಸರ್ವೇಶ್ವರ ನಿಮಗೂ ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲ ಸುಖ ಸಂತೋಷಗಳಿಗಾಗಿ ನೀವೂ ಲೇವಿಯರೂ ನಿಮ್ಮ ಮಧ್ಯೆಯಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ನಿಮಗೂ ನಿಮ್ಮ ಮನೆಗೂ ಲೇವಿಯರಿಗೂ ನಿಮ್ಮ ಸಂಗಡ ಇರುವ ಪರವಾಸಿಗಳಿಗೂ ನೀಡಿರುವ ಸೌಲಭ್ಯಕ್ಕಾಗಿ ಸಂತೋಷ ಪಡಬೇಕು.