Deuteronomy 26:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪ್ರತೀ ಮೂರನೆಯ ವರ್ಷವು ದಶಮಾಂಶದ ವರ್ಷವಾಗಿರುವುದು. ಆಗ ನಿಮ್ಮ ಬೆಳೆಯ ಹತ್ತನೆಯ ಒಂದು ಅಂಶವನ್ನು ಲೇವಿಯರಿಗೂ ಪರದೇಶಸ್ಥರಿಗೂ ಅನಾಥರಿಗೂ ವಿಧವೆಯರಿಗೂ ಕೊಡಬೇಕು. ಆಗ ಅವರಿಗೆ ಊಟಮಾಡಲು ಸಾಕಷ್ಟು ಇರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.
Kannada BSI Bible 2016
ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ತಾಯಿತಂದೆಯಿಲ್ಲದವರೂ ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.
Kannada Bible (KNCL) BSI 2016
“ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರು, ಪರದೇಶಿಗಳು, ತಾಯಿತಂದೆಯಿಲ್ಲದವರು ಹಾಗು ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹತ್ತನೆಯ ಪಾಲನ್ನು ಕೊಡುವ ವರ್ಷವಾಗಿರುವ ಮೂರನೆಯ ವರ್ಷದಲ್ಲಿ ನೀವು ನಿಮ್ಮ ಎಲ್ಲಾ ಹುಟ್ಟುವಳಿಯ ಹತ್ತನೆಯ ಪಾಲನ್ನು ಪ್ರತ್ಯೇಕಿಸಿದಾಗ, ನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ದಿಕ್ಕಿಲ್ಲದವರೂ ವಿಧವೆಯರೂ ಉಂಡು ತೃಪ್ತರಾಗುವಂತೆ ಅದನ್ನು ಅವರಿಗೆ ಕೊಡಬೇಕು.