Deuteronomy 26:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ದುಃಖದಲ್ಲಿರುವಾಗ ಆ ಆಹಾರವನ್ನು ಊಟಮಾಡಲಿಲ್ಲ. ಈ ಬೆಳೆಯನ್ನು ಶೇಖರಿಸುವಾಗ ನಾನು ಅಶುದ್ಧನಾಗಿರಲಿಲ್ಲ. ಸತ್ತವರಿಗಾಗಿ ಈ ಆಹಾರವನ್ನು ಅರ್ಪಿಸಲಿಲ್ಲ. ನನ್ನ ದೇವರಾದ ಯೆಹೋವನೇ, ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗಿದ್ದೇನೆ. ನೀನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ನಾನು ಮಾಡಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.
Kannada BSI Bible 2016
ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು [ಸತ್ತವರಿಗೋಸ್ಕರ] ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇವಿುಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.
Kannada Bible (KNCL) BSI 2016
ನಾವು ಸತ್ತವರಿಗಾಗಿ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದು ಹಾಕಲಿಲ್ಲ; ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಟ್ಟು ನೀವು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಃಖದ ಸಮಯದಲ್ಲಿ ಪರಿಶುದ್ಧವಾದದ್ದರಲ್ಲಿ ಏನೂ ತಿನ್ನಲಿಲ್ಲ. ಅಶುದ್ಧರಾಗಿ ಅದರಿಂದ ತೆಗೆದುಕೊಂಡು ಉಪಯೋಗಿಸಲಿಲ್ಲ. ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ. ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿದ್ದೇವೆ. ನಮಗೆ ಆಜ್ಞಾಪಿಸಿದ್ದೆಲ್ಲಾ ಮಾಡಿದ್ದೇವೆ.