Deuteronomy 26:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅನುಸರಿಸಲು ನಿಮ್ಮ ದೇವರಾದ ಯೆಹೋವನು ಇಂದು ನಿಮಗೆ ಆಜ್ಞಾಪಿಸುತ್ತಾನೆ. ನಿಮ್ಮ ಪೂರ್ಣಹೃದಯದಿಂದಲೂ ಆತ್ಮದಿಂದಲೂ ಅವುಗಳನ್ನು ಎಚ್ಚರಿಕೆಯಿಂದ ಅನುಸರಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಆಜ್ಞಾಪಿಸಿದ್ದಾನೆ. ಆದುದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.
Kannada BSI Bible 2016
ಈ ನಿಯಮ ನ್ಯಾಯಗಳನ್ನು ಮಾಡಬೇಕೆಂದು ನಿನ್ನ ದೇವರಾದ ಕರ್ತನು ಈಹೊತ್ತು ನಿನಗೆ ಆಜ್ಞಾಪಿಸು ತ್ತಾನೆ; ಆದದರಿಂದ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಕಾಪಾಡಿ ಕೈಕೊಳ್ಳ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಆಜ್ಞಾಪಿಸಿದ್ದಾನೆ. ಆದದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.
Kannada Bible (KNCL) BSI 2016
“ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದುದರಿಂದ ನೀವು ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ತೀರ್ಪುಗಳನ್ನೂ ನಿಯಮಗಳನ್ನೂ ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದ್ದರಿಂದ ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.