Deuteronomy 26:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಹೊತ್ತು ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನಾಂಗವೆಂದು ಸ್ವೀಕರಿಸಿದ್ದಾನೆ ಎಂದು ವಾಗ್ದಾನ ಮಾಡುತ್ತಾನೆ. ನೀವು ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೋ ನಿಮ್ಮ ವಿಷಯದಲ್ಲಿ, “ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ
Kannada BSI Bible 2016
ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೋ ನಿಮ್ಮ ವಿಷಯದಲ್ಲಿ - ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯಜನರಾಗಿರುವರೆಂದೂ
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಆದರೋ ನಿಮ್ಮ ವಿಷಯದಲ್ಲಿ, ‘ಇವರು ನನ್ನ ಆಜ್ಞೆಗಳನ್ನೆಲ್ಲ ಅನುಸರಿಸುವವರಾದರೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯಜನರಾಗಿರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಹೊತ್ತು ನಿಮಗೆ ಯೆಹೋವ ದೇವರು ಘೋಷಿಸಿದಂತೆ, ನೀವು ಅವರ ಜನರೂ ಅವರ ಸಂಗ್ರಹಿಸಿದ ಆಸ್ತಿಯೂ ಆಗಿದ್ದೀರೆಂದು ವಾಗ್ದಾನಮಾಡಿದ್ದಾರೆ. ನೀವು ಅವರ ಎಲ್ಲಾ ಆಜ್ಞೆಗಳನ್ನು ಪಾಲಿಸಿರಿ.