Deuteronomy 26:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ಜನಾಂಗಗಳಿಗಿಂತ ನಿಮ್ಮನ್ನು ಬಲಿಷ್ಠರಾದ ಜನಾಂಗವನ್ನಾಗಿ ಮಾಡುವನು. ದೇವರು ನಿಮಗೆ ಜನರಿಂದ ಹೊಗಳಿಕೆಯನ್ನು, ಪ್ರಖ್ಯಾತಿಯನ್ನು ಮತ್ತು ಗೌರವವನ್ನು ಬರಮಾಡುವನು; ಆತನು ವಾಗ್ದಾನ ಮಾಡಿದಂತೆಯೇ ನೀವು ಪವಿತ್ರ ಜನರಾಗುವಿರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.
Kannada BSI Bible 2016
ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರೆಂದೂ ಒಡಂಬಟ್ಟಿದ್ದಾನೆ.
Kannada Bible (KNCL) BSI 2016
ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,’ ಎನ್ನುವರು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನಿರ್ಮಿಸಿದ ಎಲ್ಲಾ ದೇಶಗಳಿಗಿಂತ ಹೆಚ್ಚಾಗಿ ನಿಮ್ಮನ್ನು ಕೀರ್ತಿಯಲ್ಲಿಯೂ, ಪ್ರಸಿದ್ಧತೆಯಲ್ಲಿಯೂ, ಘನತೆಯಲ್ಲಿಯೂ, ಸ್ಥಾಪಿಸುವುದಾಗಿ ನಿಮ್ಮ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದಂತೆ ನೀವು ಅವರಿಗೆ ಪರಿಶುದ್ಧ ಜನರಾಗಬೇಕೆಂದೂ ಘೋಷಿಸಿದ್ದಾರೆ.