Deuteronomy 26:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಕೊಡುವ ಆ ದೇಶದಲ್ಲಿ ನೀವು ಪ್ರಥಮ ಬೆಳೆಯನ್ನು ಕೂಡಿಸುವಿರಿ. ಪುಟ್ಟಿಗಳಲ್ಲಿ ಧಾನ್ಯವನ್ನು ಕೂಡಿಸುವಾಗ ಪ್ರಥಮ ಭಾಗವನ್ನು ಪ್ರತ್ಯೇಕವಾಗಿಟ್ಟು ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸುವ ಸ್ಥಳಕ್ಕೆ ಅದನ್ನು ತೆಗೆದುಕೊಂಡು ಹೋಗಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.
Kannada BSI Bible 2016
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿಯೂ ನೀವು ಕೆಲವು ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಿ
Kannada Bible (KNCL) BSI 2016
ಅವರು ದಯಪಾಲಿಸಿದ ಹೊಲದ ಎಲ್ಲ ಬೆಳೆಗಳಲ್ಲೂ ಕೆಲವು ಪ್ರಥಮ ಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡುಹೋಗಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಿಮ್ಮ ದೇಶದಿಂದ ನೀವು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಬುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವದಕ್ಕೆ ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.