Deuteronomy 26:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ಸೇವೆ ಮಾಡುತ್ತಿರುವ ಯಾಜಕನಿಗೆ, ‘ಯೆಹೋವನು ನನ್ನ ಪೂರ್ವಿಕರಿಗೆ ಒಂದು ದೇಶವನ್ನು ಕೊಡುವುದಾಗಿ ವಾಗ್ದಾನ ಮಾಡಿದನು. ನಾನು ಆ ದೇಶಕ್ಕೆ ಬಂದಿರುತ್ತೇನೆ’ ಎಂದು ಹೇಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಅದನ್ನು ತೆಗೆದುಕೊಂಡುಹೋಗಿ ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ, “ಯೆಹೋವನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಾವು ಸೇರಿದ್ದಾಯಿತೆಂದು ನೀನು ಸೇವಿಸುವ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾವು ಈಗ ಒಪ್ಪಿಕೊಂಡಿದ್ದೇವೆ” ಎಂದು ಹೇಳಬೇಕು.
Kannada BSI Bible 2016
ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ--ಕರ್ತನು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ನಾನು ಸೇರಿದ್ದೇನೆಂದು ಈಹೊತ್ತು ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡುತ್ತೇನೆ ಎಂದು ಹೇಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ - ಯೆಹೋವನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಾವು ಸೇರಿದ್ದಾಯಿತೆಂದು ನೀನು ಸೇವಿಸುವ ದೇವರಾದ ಯೆಹೋವನ ಸನ್ನಿಧಿಯಲ್ಲಿ ಈಗ ಒಪ್ಪಿಕೊಂಡಿದ್ದೇವೆ ಎಂದು ಹೇಳಬೇಕು.
Kannada Bible (KNCL) BSI 2016
ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ, ‘ಸರ್ವೇಶ್ವರ ನಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಾನು ಸೇರಿದ್ದಾಯಿತೆಂದು ನಾವು ಸೇವೆಮಾಡುವ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಈಗ ಒಪ್ಪಿಕೊಳ್ಳುತ್ತೇನೆ’ ಎಂದು ಹೇಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ, “ಯೆಹೋವ ದೇವರು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನಾನು ಸೇರಿದ್ದಾಯಿತೆಂದು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಈಗ ನಾನು ಒಪ್ಪಿಕೊಳ್ಳುತ್ತೇನೆ,” ಎಂದು ಹೇಳಬೇಕು.