Deuteronomy 26:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಾನದಲ್ಲಿ ನೀವು ಹೀಗೆ ಅರಿಕೆ ಮಾಡಬೇಕು: ‘ನಮ್ಮ ಪೂರ್ವಿಕರು ಊರೂರು ತಿರುಗುತ್ತಿದ್ದ ಅರಾಮ್ಯರಾಗಿದ್ದರು. ಅವರು ಈಜಿಪ್ಟನ್ನು ಸೇರಿ ಅಲ್ಲಿಯೇ ನೆಲೆಸಿದರು. ಅಲ್ಲಿಗೆ ಅವರು ಹೋದಾಗ ಅವರು ಕೆಲವರೇ ಆಗಿದ್ದರು. ಆದರೆ ಕಾಲಕ್ರಮೇಣ ಅವರು ದೊಡ್ಡ ಜನಾಂಗವಾಗಿ ಅಭಿವೃದ್ಧಿ ಹೊಂದಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.
Kannada BSI Bible 2016
ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ - ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.
Kannada Bible (KNCL) BSI 2016
ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು.